ಬೆಳಗಾವಿ: ಬೆಳಗಾವಿ ಜಿಲ್ಲೆಯ ಭೂತರಾಯನಹಟ್ಟಿ ಗ್ರಾಮದ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಗಳಲೆ ರೋಗಗಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ.
ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ರೋಗ ಕಾರಣವಗಿದೆ.



ಮೃಗಾಲಯದಲ್ಲಿದ್ದ 38 ಕೃಷ್ಣಮೃಗಗಳಲ್ಲಿ 31 ಕೃಷ್ಣಮೃಗಗಳು ಈ ರೋಗಕ್ಕೆ ಬಲಿಯಾಗಿದೆ. ಮೃಗಾಲಯದಲ್ಲಿರುವ ಉಳಿದ ಪ್ರಾಣಿಗಳಿಗೆ ಗಳಲೆ ರೋಗ ಹರಡದಂತೆ ಮುಂಜಾಗೃತಾ ಕ್ರಮವಾಗಿ ಚಿಕಿತ್ಸೆ, ಮುನ್ನೆಚ್ಚರಿಕೆ ವಹಿಸಲಾಗಿದೆ.




