ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಡಳಿತ ಸಮಿತಿಯ ಸಹಕಾರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಂದಾಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಶು ಸಂಗೋಪನೆ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಸಿಬ್ಬಂದಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಕಡಬ ತಾಲೂಕು ಆಡಳಿತ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಕಚೇರಿಯ ಅಧಿಕಾರಿಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅಧಿಕಾರಿಗಳು, ಅಂಬೇಡ್ಕರ್ ಅವರ ಸಮಾಜಮುಖಿ ಚಿಂತನೆಗಳು ಮತ್ತು ಸಂವಿಧಾನದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.





ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದು, ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು.

