ಕಡಬ, ಏಪ್ರಿಲ್ 17: ಕಡಬ ತಾಲೂಕಿನ ಬಲ್ಯದಲ್ಲಿ ಇಂದು (ಶುಕ್ರವಾರ) ಬೃಹತ್ ರಕ್ತದಾನ ಹಾಗೂ ಉಚಿತ ಕಣ್ಣಿನ ತಪಾಸನಾ ಶಿಬಿರ ಆಯೋಜಿಸಲಾಗಿದೆ.
ಬಲ್ಯ ಶ್ರೀ ರಾಮ ಯುವಕ ಮಂಡಲ(ರಿ.) ಇದರ ದಶಮಾನೋತ್ಸವ ಅಂಗವಾಗಿ ವೆನ್ಲಾಕ್ ರಕ್ತ ನಿಧಿ ಘಟಕ, ಮಂಗಳೂರು ಹಾಗೂ ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಈ ಶಿಬಿರ ನಡೆಯುತ್ತಿದೆ.

ಇಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಲ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಬಿರ ನಡೆಯಲಿದೆ.
*ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಲಾಗುತ್ತಿದ್ದು, ಅಗತ್ಯವಿರುವವರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗುವುದು.
*ಕಣ್ಣಿನ ಪೊರೆ ಸಮಸ್ಯೆ ಇರುವವರಿಗೆ ಶಸ್ತ್ರಚಿಕಿತ್ಸೆಯ ವ್ಯವಸ್ಥೆಯೂ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ರಕ್ತದಾನದ ಮೂಲಕ ಜೀವ ಉಳಿಸುವ ಸತ್ಕಾರ್ಯದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಶಿಬಿರದಲ್ಲಿ ಭಾಗವಹಿಸುವವರು ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ತರಬೇಕೆಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: 8105410105 ಅನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *