ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪಾರ್ವತಿ ಸಿದ್ದರಾಮಯ್ಯ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.



ಸದ್ಯ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.




