ಕಡಬ, ಏಪ್ರಿಲ್ 18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕಡಬ ತಾಲೂಕಿನ ವಿವಿಧ ವಲಯಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ಪ್ರಸ್ತುತ ವರ್ಗಾವಣೆಯಾದ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವತಿಯಿಂದ ಅಭಿನಂದನಾ ಪೂರ್ವಕ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.

ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ವೀಣಾ ಕೆ (ಸವನೂರು ವಲಯ ಮೇಲ್ವಿಚಾರಕಿ), ಸುಜಾತ ಕೆ (ಅಲಂಕಾರು ವಲಯ ಮೇಲ್ವಿಚಾರಕಿ), ಆನಂದ ಡಿ.ಬಿ (ನೆಲ್ಯಾಡಿ ವಲಯ ಮೇಲ್ವಿಚಾರಕ), ಜಯಶ್ರೀ (ಗೊಳಿತೊಟ್ಟು ವಲಯ ಮೇಲ್ವಿಚಾರಕಿ) ಹಾಗೂ ಶೀಲಾವತಿ (ಲೆಕ್ಕ ಪರಿಶೋಧಕಿ) ಅವರ ಸೇವೆಯನ್ನು ಸ್ಮರಿಸಿ ಜನಜಾಗೃತಿ ವೇದಿಕೆ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವನೂರು ವಹಿಸಿದ್ದರು. ವೇದಿಕೆಯಲ್ಲಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ರೈ ಮೈಲೇರಿ, ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಹಾಗೂ ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಕೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *