ಪುತ್ತೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ ಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಪುತ್ತೂರಿನ ಮನೀಷಾ ಸಭಾಂಗಣದಲ್ಲಿ ಶುಕ್ರವಾರ ನಡೆಸಲಾಯಿತು.





ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಪಿ.ಕೆ. ಸತೀಶನ್ ಉದ್ಘಾಟಿಸಿ ಶುಭಾಶಯ ಕೋರಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ಯಾನಲ್ ವಕೀಲರಾದ ಚಂದ್ರಾವತಿ ಟಿ. ಅವರು ಹಿರಿಯ ನಾಗರಿಕರ ಹಕ್ಕು, ಕಾನೂನು ಸೌಲಭ್ಯ ಹಾಗೂ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೆ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಅಧ್ಯಕ್ಷ ಮೊಹಮ್ಮದ್ ರಫೀಕ್ ಹಾಗೂ ಸಹಾಯಕ ಅಭಿಯೋಜಕಿ ಕವಿತಾ ಅವರು ಶುಭಾಶಯ ಕೋರಿದರು.
ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷ ಪಿ. ಉಲ್ಲಾಸ್ ಪೈ ಸ್ವಾಗತಿಸಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ ರಾಜೇಶ್ವರಿ ವಕೀಲರು ವಂದನಾ ಹೇಳಿದರು. ವತ್ಸಲ ನಾಯಕ್ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ತಾ.ಕಾ.ಸೇ. ಸಮಿತಿ ಪುತ್ತೂರು ಪ್ಯಾರಾ ಲೀಗಲ್ ವಾಲಂಟಿಯರ್ ನಯನ ರೈ ಕಾರ್ಯಕ್ರಮವನ್ನು ನಿರೂಪಿಸಿದರು.



