ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ   ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು  ಬಂಧಿಸಿದ್ದಾರೆ.
ವಾಷಿಂಗ್ಟನ್‌ ಮೂಲದ ಮಹಿಳೆ ಮೇಲೆ ಜಾರ್ಖಂಡ್‌ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್ ಕುಮಾರ್, ಹೋಂಸ್ಟೇ  ಮಾಲೀಕ ವಿಶಾಲ್ ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್‌ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.

ಇನ್ನೂ ವಿಷಯ ತಿಳಿದ ಹೋಮ್‌ಸ್ಟೇ ಮಾಲೀಕ ವಿಶಾಲ್‌ ಪ್ರಕರಣವನ್ನೇ ಮುಚ್ಚಿಹಾಕಲು ಯತ್ನಿಸಿರೋದು ದೂರಿನಿಂದ ಗೊತ್ತಾಗಿದೆ. ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದಾನೆ. ಹೋಂ ಸ್ಟೇ ವೈಫೈ ಕೂಡ ಕಟ್‌ ಮಾಡಿದ್ದಾನೆ. 3 ದಿನದ ಬಳಿಕ ಸಂತ್ರಸ್ತೆ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದಾರೆ. ನಂತರ ಮೈಸೂರಿಗೆ ಬಂದ ವಿದೇಶಿ ಮಹಿಳೆ ಅಮೆರಿಕದ ರಾಯಭಾರ ಕಚೇರಿಯನ್ನ (American Embassy) ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್‌ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ ಡೆಲ್ಲಿ ಹಾಗೂ ಚೆನ್ನೈ ಕಚೇರಿಗಳ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಂಗಳವಾರ ಕೊಡಗಿಗೆ ಭೇಟಿ ನೀಡಿದ್ದಾರೆ. ಆದ್ರೆ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ನೀಡಲು ಕೊಡಗು ಎಸ್ಪಿ ಹಿಂದೇಟು ಹಾಕಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಹಾಗೂ ಹೋಂ ಸ್ಟೇ ಮಾಲಿಕ ಇಬ್ಬರನ್ನೂ ಬಂಧಿಸಿದ್ದಾರೆ. ಕೋರ್ಟ್‌ ಮೇ 3ರ ವರೆಗೆ ನ್ಯಾಯಾಂಗ ಬಂಧನದಲ್ಲಿಡಲು ಆದೇಶ ನೀಡಿದೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ, ಈಗಲೇ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *