ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿರುವ ಪ್ರಕಟಣೆಯಂತೆ, 2026ರ ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 23ರಂದು ಮಧ್ಯಾಹ್ನ 12.00 ಗಂಟೆಗೆ ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in� ವೆಬ್ಸೈಟ್ ಮೂಲಕ ಹಾಗೂ KarnatakaOne Mobile App ಮೂಲಕ ವೀಕ್ಷಿಸಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಎಸ್ಎಂಎಸ್ (SMS) ಮುಖಾಂತರವೂ ಫಲಿತಾಂಶವನ್ನು ತಿಳಿಸಲಾಗುತ್ತದೆ ಎಂದು ತಿಳಿಸಿದೆ.




ಇದೇ ವೇಳೆ, ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಏಪ್ರಿಲ್ 23ರಂದು ಮಧ್ಯಾಹ್ನ 12.00 ಗಂಟೆಯಿಂದಲೇ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ https://www.digilocker.gov.in� ವೆಬ್ಸೈಟ್ ಬಳಸಬಹುದು.
ಅಂಕಪಟ್ಟಿ ಡೌನ್ಲೋಡ್ ಮಾಡುವ ವಿಧಾನಕ್ಕೆ ಸಂಬಂಧಿಸಿದಂತೆ https://tinyurl.com/mw84wmh9� ಲಿಂಕ್ನಲ್ಲಿ ವಿಡಿಯೋ ಲಭ್ಯವಿದೆ. ಈ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ಮಂಡಳಿ ಮನವಿ ಮಾಡಿದೆ.


