ಕಡಬ, ನ.18: ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಡಬ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಜೋಕಿಮರ ಹಿರಿಯ ಪ್ರಾಥಮಿಕ ಶಾಲೆ, ಕಡಬದಲ್ಲಿ ಸ್ಪರ್ಧೆಗಳು ನಡೆದವು.

ಕಿರಿಯ ಪ್ರಾಥಮಿಕ ವಿಭಾಗದ ಸ್ಪರ್ಧೆಗಳಲ್ಲಿ ಧನ್ವಿ ಕೆ. (4ನೇ ತರಗತಿ) ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನ, ದ್ವಿಷಾ ಎಚ್. (3ನೇ ತರಗತಿ) ಸಂಸ್ಕೃತ ಧಾರ್ಮಿಕ ಪಠಣದಲ್ಲಿ ದ್ವಿತೀಯ ಸ್ಥಾನ, ಭಾನ್ವಿ ಆರ್. ಶೆಟ್ಟಿ (4ನೇ ತರಗತಿ) ಕನ್ನಡ ಕಂಠಪಾಠದಲ್ಲಿ ದ್ವಿತೀಯ ಸ್ಥಾನ, ಭಾಶ್ವಿಕ (3ನೇ ತರಗತಿ) ಭಕ್ತಿಗೀತೆಯಲ್ಲಿ ತೃತೀಯ ಸ್ಥಾನ, ಭವಿನ್ ಶೆಟ್ಟಿ (4ನೇ ತರಗತಿ) ಆಶುಭಾಷಣದಲ್ಲಿ ತೃತೀಯ ಸ್ಥಾನ ಮತ್ತು ಕೃತನ್ ಪಾಡ್ಲ (2ನೇ ತರಗತಿ) ಕ್ಲೇ ಮಾಡೆಲಿಂಗ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ದ್ವಿಜಾ ಎಚ್. ಆಶುಭಾಷಣದಲ್ಲಿ ಪ್ರಥಮ ಸ್ಥಾನ ಮತ್ತು ದೇಶಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಚಿರಂತ್ ಸಿ. ಶೆಟ್ಟಿ (7ನೇ ತರಗತಿ) ಭಕ್ತಿಗೀತೆಯಲ್ಲಿ ದ್ವಿತೀಯ, ಅಭಿನವ್ ಕಾಚಿಂತ್ತಾಯ (7ನೇ ತರಗತಿ) ಕನ್ನಡ ಕಂಠಪಾಠದಲ್ಲಿ ದ್ವಿತೀಯ, ಶಾರ್ವಿ ಎಸ್. ರೈ (7ನೇ ತರಗತಿ) ಅಭಿನಯಗೀತೆ ಹಾಗೂ ಕವನವಾಚನದಲ್ಲಿ ದ್ವಿತೀಯ, ಆರಾಧ್ಯ ಜೆ. ಗೌಡ (6ನೇ ತರಗತಿ) ಇಂಗ್ಲಿಷ್ ಕಂಠಪಾಠದಲ್ಲಿ ದ್ವಿತೀಯ, ಶಾಶ್ವತ್ ವಿ.ಎ. (7ನೇ ತರಗತಿ) ಚಿತ್ರಕಲೆಯಲ್ಲಿ ದ್ವಿತೀಯ, ಮೃದನ್ ಎಸ್. ರೈ (7ನೇ ತರಗತಿ) ಮಿಮಿಕ್ರಿಯಲ್ಲಿ ತೃತೀಯ ಹಾಗೂ ಗುರುದೀಪ್ ಪಿ.ವೈ. (7ನೇ ತರಗತಿ) ಕ್ಲೇ ಮಾಡೆಲಿಂಗ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಸ್ಪರ್ಧೆಯ ಒಟ್ಟು ಫಲಿತಾಂಶದಲ್ಲಿ ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಹಾಗೂ ಕಿರಿಯ ವಿಭಾಗದಲ್ಲಿ ತೃತೀಯ ಸಮಗ್ರ ಪ್ರಶಸ್ತಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಲಭಿಸಿದೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *