ಬಿಳಿನೆಲೆ ಗ್ರಾಮದ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ.
ಈ ವರ್ಷ ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 10 ಮಂದಿ ಡಿಸ್ಟಿಂಕ್ಷನ್, 21 ಮಂದಿ ಫಸ್ಟ್ ಕ್ಲಾಸ್, 3 ಮಂದಿ ಸೆಕೆಂಡ್ ಕ್ಲಾಸ್ ಹಾಗೂ 1 ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.




ಶಾಲೆಯ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮದಿಂದ ಈ ಉತ್ತಮ ಫಲಿತಾಂಶ ಸಾಧ್ಯವಾಗಿದೆ. ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.

