ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿರುವುದರಿಂದ ವಿಶ್ವ ಹಿಂದೂ ಪರಿಷದ್, ಕರ್ನಾಟಕ ದಕ್ಷಿಣ ಪ್ರಾಂತವು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದೆ.

ಕಳೆದ ವರ್ಷ ಇದೇ ರೀತಿ ರಾಜ್ಯದಲ್ಲಿ ಹಲವಾರು ಘಟನೆಗಳು ನಡೆದಿವೆ, ಅದರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಆದರೂ ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಪ್ರಕರಣಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಖಂಡನೀಯ. ಮತ್ತು ಕೆಲ ಶಾಲಾ ಕಾಲೇಜುಗಳು ಹಿಂದೂ ಸಮಾಜದ ವಿರುದ್ಧ ಹಗೆ ಸಾಧಿಸುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಜನಿವಾರವು ನಮ್ಮ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಗೌರವದ ಪ್ರತೀಕವಾಗಿದೆ. ಅದನ್ನು ಅವಮಾನಿಸುವ ಯಾವುದೇ ನಡೆ ಸಮಾಜ ಸಹಿಸುವುದಿಲ್ಲ. ಈಗಾಗಲೇ ಮೂರು ಜನರನ್ನು ಅಮಾನತು ಮಾಡಲಾಗಿದ್ದು, ಪದೇ ಪದೇ ಈ ರೀತಿ ಘಟನೆ ನಡೆಯುತ್ತಿರುವುದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರ ತನಿಖೆಗೆ ಒಳಪಡಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *