ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ದಿನವಿಡೀ ಉರಿ ಬಿಸಿಲಿನ ವಾತಾವರಣ ಇತ್ತು. ಸೆಕೆಯ ಬೇಗೆ ಹೆಚ್ಚಿತ್ತು. ಸಂಜೆ ವೇಳೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 34.7 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ. ಏರಿಕೆ ಮತ್ತು 27.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.8 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು. ರವಿವಾರ ರಾತ್ರಿಯ ವೇಳೆ ಮೂಡುಬಿದಿರೆ ಮತ್ತು ಆಸುಪಾಸಿನಲ್ಲಿ ಲಘು ಮಳೆಯಾಗಿದೆ.

Leave a Reply

Your email address will not be published. Required fields are marked *