ಪುತ್ತೂರು : ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಆಂಬುಲೆನ್ಸ್ ಚಾಲಕ ಮಾಧವ ಗೌಡ ಕಾಣಿಯೂರು (50) ಅವರು ಏಪ್ರಿಲ್ 29ರಂದು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ.






ಮಾಧವ ಗೌಡ ಅವರು ಕಳೆದ ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಸರಳ ಸ್ವಭಾವ ಹಾಗೂ ಸೇವಾ ಮನೋಭಾವದಿಂದ ಸ್ಥಳೀಯರಲ್ಲಿ ಪರಿಚಿತರಾಗಿದ್ದರು.
ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ನಿಧನದಿಂದ ಕುಟುಂಬಸ್ಥರು ಮತ್ತು ಪರಿಚಿತರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.


