ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮತದಾನದ ವೇಳೆ ಗಂಭೀರ ಆರೋಪವೊಂದು ಕೇಳಿಬಂದಿದೆ.
ಫಾಲ್ಟಾದ ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ವಿಡಿಯೋ ಸಹಿತ ಆರೋಪಿಸಿದ್ದಾರೆ.








ಈ ಕುತಂತ್ರವನ್ನು ಅಮಿತ್ ಮಾಳವೀಯ “ಡೈಮಂಡ್ ಹಾರ್ಬರ್ ಮಾಡೆಲ್” ಎಂದು ಕರೆದಿದ್ದು, ಟಿಎಂಸಿ ಕಾರ್ಯಕರ್ತರು ಮತದಾರರಿಗೆ ಬಿಜೆಪಿಗೆ ಮತ ಹಾಕದಂತೆ ತಡೆಯಲು ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ದೂರಿದ್ದಾರೆ.
ಯಾವ ಮತಗಟ್ಟೆಗಳಲ್ಲಿ ಟೇಪ್ನಿಂದ ಮುಚ್ಚಲಾಗಿದೆಯೋ ಆ ಎಲ್ಲಾ ಮತಗಟ್ಟೆಗಳಲ್ಲಿ ತಕ್ಷಣವೇ ಮರುಮತದಾನ (Repoll) ನಡೆಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

