ಕಡಬ: ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಇಂದು (ಗುರುವಾರ, 20-11-2025) ಬೆಳಿಗ್ಗೆ 10.30ಕ್ಕೆ ಪಿಎಚ್‌ಸಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಈ ಪ್ರತಿಭಟನೆಯನ್ನು ಕಡಬ ತಾಲೂಕು ಅಭಿವೃದ್ಧಿ, ರೈತ–ಕೃಷಿ ಕಾರ್ಮಿಕರ ಹೋರಾಟ ಸಮಿತಿ ಹಾಗೂ ವಿವಿಧ ಸಾಮಾಜಿಕ ಸಂಘ–ಸಂಸ್ಥೆಗಳು ಸಂಯುಕ್ತವಾಗಿ ಆಯೋಜಿಸಿವೆ. ಆರೋಗ್ಯ ಕೇಂದ್ರದಲ್ಲಿ ಇರುವ ಅನಿಯಮಗಳು, ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆ ಹಾಗೂ ಮೂಲಸೌಕರ್ಯ ಕೊರತೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಪ್ರತಿಭಟನೆ ಏರ್ಪಡಿಸಲಾಗಿದೆ.

ಪ್ರತಿಭಟನೆಯಲ್ಲಿ ಸ್ಥಳೀಯ ನಾಯಕರು, ಸಂಘಟನೆಯ ಪ್ರತಿನಿಧಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *