ಕಾರ್ಕಳ: ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಬಿಪಿ ಲೋ ಆಗಿ ಆತ ಅಸ್ವಸ್ಥಗೊಂಡಿದ್ದು, ಪರಿಣಾಮ ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ನ. 20ರಂದು ಕಾರ್ಕಳದಲ್ಲಿ ನಡೆದಿದೆ.
ಅನಂತಶಯನದಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಸ್ ಚಾಲಕನಿಗೆ ಬಿಪಿ ಲೋ ಆಗಿದ್ದು, ನಿಯಂತ್ರಣ ತಪ್ಪಿದ ಬಸ್ ಎದುರಿನಲ್ಲಿ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.




ಪರಿಣಾಮವಾಗಿ ರಿಕ್ಷಾ ಚಾಲಕ ಗಾಯಗೊಂಡಿದ್ದು ಗಾಯಾಳು ಮತ್ತು ಬಸ್ ಚಾಲಕನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಇನ್ನಷ್ಟೇ ಲಭ್ಯವಾಗಬೇಕಿದೆ.



