ಕಾರ್ಕಳ : ಬಾವಿಗೆ ಅಡ್ಡವಾಗಿ ಅಳವಡಿಸಲಾಗಿದ್ದ ಕಂಬ ಮುರಿದುಬಿದ್ದ ಪರಿಣಾಮ ನೀರು ಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಕೆಂಚಬೆಟ್ಟು ಎಂಬಲ್ಲಿ ನಡೆದಿದೆ.

ಪ್ರಶಾಂತ್ ಭಂಡಾರಿ ಬಾವಿಗೆ ಬಿದ್ದ ಯುವಕನಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ನ. 24 ರ೦ದು ಯುವಕನ ಮನೆ ಸಮೀಪದಲ್ಲಿ ಈ ಘಟನೆ ಸಂಭವಿಸಿದ್ದು, ಮನೆ ಮಂದಿ ನೀಡಿದ ಮಾಹಿತಿಯನ್ವಯ ಅಗ್ನಿಶಾಮಕ ದಳದ ಸಿಬ್ಬಂದಿಯರು ಕಾರ್ಯಚರಣೆ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿಗಳಾದ ಅಚ್ಚುತ ಕರ್ಕೇರ, ಹರಿಪ್ರಸಾದ್ ಶೆಟ್ಟಿಗಾರ್, ಮುಝಾಮಿಲ್, ದಿನೇಶ್ ಮತ್ತು ಗಣೇಶ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *