ಕಡಬ: ಪತ್ನಿ ಹಾಗೂ ಸ್ನೇಹಿತನ ನಡುವಿನ ಮೊಬೈಲ್ ಸಂಪರ್ಕಕ್ಕೆ ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿ ರಾಕೇಶ್ (36) ಅವರ ಬದುಕನ್ನು ಕಳೆದುಕೊಂಡಿದೆ.
ಮೃತರ ತಂದೆ ಸೊಲೊಮೊನ್ (54) ಅವರು ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.




ರಾಕೇಶ್ ಅವರು ಕಡಬದ ಕಲಾರದಲ್ಲಿ ದ್ವಿಚಕ್ರವಾಹನ ಗ್ಯಾರೇಜನ್ನು ನಡೆಸುತ್ತಿದ್ದರು. ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವುದು ತಿಳಿದು ತೀವ್ರ ಮನಸ್ಥಿತಿಗೆ ಒಳಗಾಗಿ, ನವೆಂಬರ್ 19ರಂದು ಸಂಜೆ ಕಡಬ ಬಜಾಜ್ ಶೋರೂಮ್ ಹಿಂಭಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಗಂಭೀರ ಸ್ಥಿತಿಯಲ್ಲಿ ಇದ್ದ ರಾಕೇಶ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಮೃತರ ಸಹೋದರ ರಾಜೇಶ್ ಅವರು ದಾಖಲಿಸಿದ್ದರು. ಆದರು ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 26, 2025 ರಂದು ರಾಕೇಶ್ ಮೃತಪಟ್ಟಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪೊಲೀಸರು ಪ್ರಕರಣದ ಎಲ್ಲಾ ಕೋನಗಳಿಂದ ತನಿಖೆಯನ್ನು ಮುಂದುವರಿಸಿದ್ದಾರೆ.



