ಪುತ್ತೂರು : ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನು ಬದಲಾಯಿಸಿದ ಬೆನ್ನಲ್ಲಿ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ.

ಈ ಬದಲಾವಣೆ ಖಂಡಿಸಿ ಇದೀಗ ಪುತ್ತೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಗ್ರಾಮಾಂತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಿಂತನ್ ನೆಲ್ಲಿಕಟ್ಟೆ, ದಯರಾಜ್ ತೆಂಕಿಲ ರಾಜೀನಾಮೆ ನೀಡಿದ್ದಾರೆ.ಈ ಇಬ್ಬರು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಲಭ್ಯ ಮಾಹಿತಿ ಪ್ರಕಾರ ಶ್ರೀನಿವಾಸ ಕಲ್ಯಾಣೋತ್ಸವ ಮುಗಿದ ನಂತರ ಇನ್ನಷ್ಟು ಮಂದಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *