ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ.

ಪ್ರೇಮಾಂಜಲಿಯವರು ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ನ.24ರಂದು ಮನೆಯಿಂದ ಹೊರಗೆ ಹೋದವಳು ವಾಪಾಸು ಬಾರದೇ ನಾಪತ್ತೆಯಾಗಿದ್ದಾಳೆ. 4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *