ಸುಬ್ರಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗುತ್ತಿದ್ದು ಇದೀಗ ಪ್ರಕರಣ ದಾಖಲಾಗಿದೆ.

ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಚೇತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು ಬಾಲಕನಿಗೆ , ದಿನಾಂಕ 24-11-2025 ರಂದು ಆರೋಪಿ ಚೇತನ್‌ ಎಂಬವರು ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ನಲ್ಲಿ ಪ್ರಸಾರವಾಗಿರುವುದು ಬಾಲಕನ ತಾಯಿಯ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಬಾಲಕನ ತಾಯಿ ದೂರು ನೀಡಿದ್ದರು.

ಸದ್ಯ ಆರೋಪಿತ ಚೇತನ್‌ ರವರ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ :60/2025, ಕಲಂ:118(1)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *