ಮಂಗಳೂರು : ಕಬಡ್ಡಿ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡ ಆಟಗಾರ್ತಿ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು – ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಕು. ಧನಲಕ್ಷ್ಮೀ ಪೂಜಾರಿಯವರನ್ನು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ, ಬಿಜೆಪಿ ಮಂಗಳೂರು ಉತ್ತರ ಮಂಡಲ ಹಾಗೂ ದಕ್ಷಿಣ ಮಂಡಲದ ಪರವಾಗಿ ಸನ್ಮಾನಿಸಿ ಅಭಿನಂದನೆಯೊಂದಿಗೆ ಸ್ವಾಗತಿಸಿದೆವು.

ಈ ಸಂದರ್ಭದಲ್ಲಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಮಿತ್ರರಾದ ಡಿ. ವೇದವ್ಯಾಸ್ ಕಾಮತ್, ದಕ್ಷಿಣ ಕನ್ನಡ ಕಬಡ್ಡಿ ಒಕ್ಕೂಟದ ಪದಾಧಿಕಾರಿಗಳು, ಆಳ್ವಾಸ್ ವಿದ್ಯಾ ಸಂಸ್ಥೆಯ ಶ್ರೀ ವಿವೇಕ್ ಆಳ್ವ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕು. ಧನಲಕ್ಷ್ಮೀಯವರ ಮುಂದಿನ ಭವಿಷ್ಯ ಉಜ್ವಲವಾಗಲಿ, ಇನ್ನಷ್ಟು ಯಶಸ್ಸಿನ ಅವಕಾಶಗಳು ಅವರಿಗೆ ದೊರಕಲಿ ಎಂದು ಶುಭ ಹಾರೈಸಿದರು.

Leave a Reply

Your email address will not be published. Required fields are marked *