ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಸಭಾಂಗಣಕ್ಕೆ ಬರುವಾಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ಘಟನೆ ಡಿ.1ರಂದು ನಡೆದಿದೆ.

ಬಿಜೆಪಿ ಪದಾಧಿಕಾರಿಗಳ ನೇಮಕ ಸಂದರ್ಭ ಪುತ್ತಿಲ ಪರಿವಾರದ ಸೂಚನೆಯನ್ನು ಪಾಲಿಸಿಲ್ಲ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ ಅವರನ್ನು ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭ ಹೊರದಬ್ಬಿದ ಘಟನೆ ನವೆಂಬರ್ 29ರಂದು ಶ್ರೀನಿವಾಸ ಕಲ್ಯಾಣದ ವೇದಿಕೆ ಬಳಿ ನಡೆದಿತ್ತು.

ಭಾನುವಾರ ರಾತ್ರಿ ಪ್ರಸನ್ನ ಮಾರ್ತ ಪತ್ನಿ ಸಹಿತವಾಗಿ ಹೋಗುವ ಸಂದರ್ಭ ಕಾರ್ಯಕ್ರಮದ ಚಂದ್ರಶೇಖರ ಎಂಬವರು ಒಳಗೆ ಹೋಗಲು ಬಿಡದೆ, ಪ್ರಸನ್ನ ಅವರನ್ನು ದೂಡಿ ಗೇಟನ್ನು ಅವರತ್ತ ತಳ್ಳಿ ತಡೆಯೊಡ್ಡಿದ್ದಾರೆ. ಈ ವಿಚಾರವಾಗಿ ಇಂದು ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಕಣ್ಣೀರಿಟ್ಟು ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಾರ್ಥನೆ ಸಂದರ್ಭ ಕಣ್ಣೀರಿಟ್ಟ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ

ಪ್ರಾರ್ಥನೆ ವೇಳೆ ಅವರು ಶ್ರೀ ದೇವರ ನಡೆಯಲ್ಲಿ ನಿನ್ನೆ ನಡೆದ ಘಟನೆ ಬಗ್ಗೆ ವಿವರಿಸಿ ‘ನಾನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿದ್ದು, ಪುತ್ತಿಲ ಪರಿವಾರದಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೆ. ಹಿಂದು ಸಮಾಜದ ಒಗ್ಗಟ್ಟಿಗಾಗಿ ಸಕ್ರೀಯವಾಗಿ ನಿಷ್ಠೆಯಲ್ಲಿ ಕೆಲಸ ಮಾಡಿದ್ದೇನೆ. ಶ್ರೀನಿವಾಸ ಕಲ್ಯಾಣೋತ್ಸವದ ಚಪ್ಪರಮುಹೂರ್ತ, ಆಮಂತ್ರಣ ಪತ್ರಿಕೆ ವಿತರಣೆ, ಗ್ರಾಮದಲ್ಲಿ ವಿತರಣೆಯಲ್ಲೂ ಭಾಗವಹಿಸಿದ್ದೇನೆ. ಆದರೂ ನಿನ್ನೆ ಕಲ್ಯಾಣೋತ್ಸವ ಸಭಾಂಗಣದಲ್ಲಿ ಕಾರ್ಯಕರ್ತರೋರ್ವರು ನನಗೆ ಮತ್ತು ಪತ್ನಿಗೆ ಒಳ ಹೋಗುವಲ್ಲಿ ತಡೆದು ಅವಮಾನಿಸಿದ್ದಾರೆ’ ಎಂದು ಕಣ್ಣೀರಿಟ್ಟು ಪ್ರಾರ್ಥನೆ ಮಾಡಿದರು.

Leave a Reply

Your email address will not be published. Required fields are marked *