ಪುತ್ತೂರು: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ಮಾಣಿಯಲ್ಲಿ ನಡೆದಿದೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಪುತ್ತೂರಿನ ಗಡಿಪಿಲದಲ್ಲಿ ಕಾರು ಕೆಟ್ಟು ನಿಂತ ಹಿನ್ನೆಲೆಯಲ್ಲಿ, ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ಈ ವೇಳೆ ಸುಮಾರು ಐದು ಗೋವುಗಳನ್ನು ವಿಶ್ವ ಹಿಂದೂ ಬಜರಂಗ ದಳದ ಕಾರ್ಯಕರ್ತರು ರಕ್ಷಿಸಿದ್ದರು. ಘಟನೆಯ ತಕ್ಷಣವೇ ಆರೋಪಿಗಳನ್ನು ಹುಡುಕಿ ಬಂಧಿಸುವಂತೆ ವಿಎಚ್‌ಪಿ ಒತ್ತಾಯಿಸಿತ್ತು.
ಈಗ, ಘಟನೆ ನಡೆದ ಎರಡು ದಿನಗಳ ಬಳಿಕ, ಪುತ್ತೂರು ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.



ಪುತ್ತೂರು ಪೊಲೀಸ್ ವೃತ್ತ ನಿರೀಕ್ಷಕ ಜಾನ್ಸನ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕಿ ಸೇಸಮ್ಮ ಹಾಗೂ ಅಪರಾಧ ವಿಭಾಗದ ವಿಶೇಷ ತಂಡ ಕಾರ್ಯಾಚರಣೆಯನ್ನು ನಡೆಸಿತು.




