ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆ ಎಂಬ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿಯವರು ವಾಮಂಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ(25) ಎಂಬಾತ ನ. 25 ರಂದು ನಾಪತ್ತೆಯಾಗಿದ್ದ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು.

ಬಳಿಕ ಈತನ ಮೃತ ದೇಹ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ಗುಡ್ಡದಲ್ಲಿ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು. ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

ಮನೆಯವರಿಗೆ ಈತನ ಸಾವಿನ ಬಗ್ಗೆ ಸಂಶಯವಿದ್ದು, ಇದೊಂದು ವ್ಯವಸ್ಥಿತ ರೀತಿಯ ಕೊಳೆಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಇದೀಗ ತಾಯಿ ಠಾಣೆಯ ಮೆಟ್ಟಿಲು ಏರಿದ್ದಾರೆ .

Leave a Reply

Your email address will not be published. Required fields are marked *