ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರದಲ್ಲಿ ನಿರ್ಮಾಣಗೊಂಡ ನೂತನ ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣಾ ಕಾರ್ಯಕ್ರಮ ಡಿಸೆಂಬರ್ 7 ರಿಂದ 9 ರವರೆಗೆ ಜರಗಲಿದೆ ಎಂದು ಲೋಕಾರ್ಪಣಾ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೈಕಾರ ಮತ್ತು ಆಡಳಿತ ಸಮಿತಿ ಅಧ್ಯಕ್ಷ ಅಜಿತ್ ರೈ ಹೊಸಮನೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುಮಾರು 26 ವರ್ಷಗಳ ಹಿಂದೆ ಆರಂಭಗೊಂಡ ಈ ಭಜನಾ ಮಂದಿರವನ್ನು ರು. 85 ಲಕ್ಷ ವೆಚ್ಚದಲ್ಲಿ ನವೀಕರಿಸಿ ನಿರ್ಮಿಸಲಾಗಿದೆ. ಲೋಕಾರ್ಪಣೆ ಕಾರ್ಯಕ್ರಮವು ವೇದಮೂರ್ತಿ ದಿನೇಶ್ ಮರಡಿತ್ತಾಯ ಅವರ ನೇತೃತ್ವದಲ್ಲಿ ನಡೆಯಲಿದೆ.

ಧಾರ್ಮಿಕ ಸಭೆ – ಡಿ.8, ಮಧ್ಯಾಹ್ನ 11 ಗಂಟೆಗೆ

ಧಾರ್ಮಿಕ ಸಭೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದು, ಒಡಿಯೂರು ದತ್ತ ಸಂಸ್ಥಾನṁ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಮೋಹನ ದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಈ ಕಾರ್ಯಕ್ರವನ್ನು ಮಹಾಲಿಂಗೇಶ್ವರ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್ ಉದ್ಘಾಟಿಸಲಿದ್ದಾರೆ.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್ ರೈ, ಹರೀಶ್ ಪೂಂಜಾ (ಬೆಳ್ತಂಗಡಿ), ಎಂಎಲ್ಸಿಗಳಾದ ಎಸ್.ಎಲ್. ಭೋಜೇ ಗೌಡ, ಕಿಶೋರ್ ಕುಮಾರ್ ಬೊಟ್ಯಾಡಿ, ಡಾ. ಸುರೇಶ್ ಪುತ್ತೂರಾಯ, ಕೇಶವ ಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾದ್ಯಂತದ ಹಲವಾರು ಗಣ್ಯರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಡಿ.7 – ಶೋಭಾಯಾತ್ರೆ ಮತ್ತು ಧ್ವಜಾರೋಹಣ

ಪೂರ್ವಾಹ್ನ ಗಣಹೋಮ

ಬೆಳಿಗ್ಗೆ 9.30: ಪುತ್ತೂರು ಮಹಾಲಿಂಗೇಶ್ವರ ದೇವಳದಿಂದ

ದೇವರ ಬೆಳ್ಳಿಯ ಉಬ್ಬು ಛಾಯಾ ಬಿಂಬ

ಹಸಿರುಹೊರೆಕಾಣಿಕೆ ಮೆರವಣಿಗೆ

ಮಧ್ಯಾಹ್ನ 12.00: ಉಗ್ರಾಣ ಮುಹೂರ್ತ

12.30: ಹಿಂದೂ ಜಾಗರಣಾ ವೇದಿಕೆ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಯೋಜಕ ಜಗದೀಶ್ ಕಾರಂತರಿಂದ ಧ್ವಜಾರೋಹಣ

ಬಳಿಕ ಅನ್ನಸಂತರ್ಪಣೆ

ಡಿ.8 – ವೈದಿಕ ವಿಧಿಗಳು ಮತ್ತು ಪ್ರತಿಷ್ಠೆ

ಬೆಳಿಗ್ಗೆ 6ರಿಂದ ವೈದಿಕ ಕಾರ್ಯಕ್ರಮಗಳು

8.44ಕ್ಕೆ ಧನುರ್ ಲಗ್ನದಲ್ಲಿ

ದೇವರ ಬೆಳ್ಳಿಯ ಉಬ್ಬು ಛಾಯಾ ಬಿಂಬದ ಪ್ರತಿಷ್ಠೆ

ಬಳಿಕ ಸತ್ಯನಾರಾಯಣ ಪೂಜೆ ಮತ್ತು ಶಿವಪಂಚಾಕ್ಷರಿ ಹವನ

ಡಿ.9 – ಭಜನಾ ಮಂಗಳೋತ್ಸವ ಮತ್ತು ಯಕ್ಷಗಾನ

ಸಂಜೆ 5.00: ಏಕಾಹ ಭಜನಾ ಮಂಗಳೋತ್ಸವ

5.30: ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಪತ್ರಿಕಾಗೋಷ್ಠಿಯಲ್ಲಿ ಲೋಕಾರ್ಪಣಾ ಸಮಿತಿ ಗೌರವಾಧ್ಯಕ್ಷ ಶ್ರೀಧರ್ ರೈ ಹೊಸಮನೆ, ಆಡಳಿತ ಸಮಿತಿ ಅಧ್ಯಕ್ಷ ಅಜಿತ್ ರೈ ಹೊಸಮನೆ, ಪ್ರಧಾನ ಕಾರ್ಯದರ್ಶಿ ಮೋಹನ್ ಕೆ, ಉಪಾಧ್ಯಕ್ಷ ಲಕ್ಷ್ಮಣ ನಾಯ್ಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *