ಪುತ್ತೂರು, ಡಿ.03: ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಪ್ರದೇಶದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಸಿಬ್ಬಂದಿ ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ಗುಪ್ತ ಮಾಹಿತಿ ಮೇರೆಗೆ ಆಂಜನೇಯ ರೆಡ್ಡಿ, ಪೊಲೀಸ್ ಉಪನಿರೀಕ್ಷಕರು (ಕಾ.ಸು) ನೇತೃತ್ವದ ತಂಡ ದಾಳಿ ನಡೆಸಿ, ಸ್ಥಳದಲ್ಲಿ ಶಂಕಿತನನ್ನು ವಶಕ್ಕೆ ಪಡೆದಿತು.
ಬಂಧಿತನನ್ನು ವಿಚಾರಿಸಿದಾಗ, ಆತನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂಬುದು ದೃಢಪಟ್ಟಿದೆ. ಶೋಧ ನಡೆಸಿದಾಗ, ಆತ ಅಕ್ರಮವಾಗಿ ಮಾರಾಟಕ್ಕಾಗಿ ಇಟ್ಟುಕೊಂಡಿದ್ದ 10 ಗ್ರಾಂ MDMA ನಿಷೇಧಿತ ಮಾದಕವಸ್ತು ಪತ್ತೆಯಾಗಿದ್ದು, ಜೊತೆಗೆ ಆತನ ಬಳಿಯಿದ್ದ ದ್ವಿಚಕ್ರ ವಾಹನವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.




ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ 119/2025, ಕಲಂ 8(C), 22(b) NDPS ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ, ಬಂಧಿತನ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣಗಳು ಈಗಾಗಲೇ ದಾಖಲಾಗಿರುವ ವಿಷಯವೂ ಬಹಿರಂಗವಾಗಿದೆ. ಮುಂದಿನ ಕಾನೂನು ಕ್ರಮ ಪೊಲೀಸರು ಕೈಗೊಂಡಿದ್ದಾರೆ.



