ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಭವ್ಯವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಕೃಷ್ಣ ಆಳ್ವ, ನರ್ಸಪ್ಪ ಪೂಜಾರಿ ಹಾಗೂ ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡು ಹೊಸ ಅಧ್ಯಕ್ಷರಿಗೆ ಶುಭ ಹಾರೈಸಿದರು.



ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಅಧಿಕಾರ ವಹಿಸಿಕೊಂಡಿದ್ದು, ಮುಂದಿನ ಅವಧಿಯಲ್ಲಿ ಪಟ್ಟಣಾಭಿವೃದ್ಧಿಗೆ ಆದ್ಯತೆ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




