ಪುತ್ತೂರು:
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲ ನಿವಾಸಿ ಪ್ರತೀಕ್ (22) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆ ತಿಳಿದ ನಂತರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.

ಮಾಹಿತಿ ಪ್ರಕಾರ, ಯುವಕನು ಅನಾರೋಗ್ಯ ಸಮಸ್ಯೆಗೆ ಒಳಪಟ್ಟಿದ್ದರಿಂದ ಆತ್ಮಹತ್ಯೆಗೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ನಿಖರ ಕಾರಣವು ಪೊಲೀಸರು ಕೈಗೊಂಡಿರುವ ಮುಂದಿನ ತನಿಖೆಯಲ್ಲಿ ಸ್ಪಷ್ಟವಾಗಲಿದೆ.

Leave a Reply

Your email address will not be published. Required fields are marked *