ಹಾಸನ: ಎಣ್ಣೆ ಮತ್ತಿನಲ್ಲಿ ಸ್ನೇಹಿತನನ್ನು ಹತ್ಯೆ ಮಾಡಿ, ಬಳಿಕ ಮದ್ಯ ನಶೆಯಲ್ಲಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಆರೋಪಿ ಉಲ್ಲಾಸ್ (21) ನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಡಿ. 8ರಂದು ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಆಟೋ ಚಾಲಕ ಕೀರ್ತಿಯನ್ನು ಬರ್ಬರವಾಗಿ ಕೊಲೆಗೈದಿದ್ದ ಪ್ರಕರಣದಲ್ಲಿ ಉಲ್ಲಾಸ್ ಪ್ರಮುಖ ಆರೋಪಿ. ಇಬ್ಬರೂ ಕಳೆದ ಎರಡು ವರ್ಷಗಳಿಂದ ಸ್ನೇಹಿತರಾಗಿದ್ದು, ಮದ್ಯಪಾನದ ವೇಳೆ ನಡೆದ ಜಗಳವೇ ಹತ್ಯೆಗೆ ಕಾರಣವಾಗಿದೆ.

ಮದ್ಯಪಾನದ ವೇಳೆ ಮಾತಿನ ಚಕಮಕಿ ನಡೆದಿದ್ದು, ಉಲ್ಲಾಸ್ ಕೀರ್ತಿಯ ಕೆನ್ನೆಗೆ ಬಾರಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳ ತೀವ್ರಗೊಂಡಿತ್ತು. ಬಳಿಕ ಆಟೋದಲ್ಲಿ ಮತ್ತಿಬ್ಬರನ್ನು ಕರೆದುಕೊಂಡು ಹೋಗಿ ಕೀರ್ತಿಯ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ನಶೆಯಲ್ಲಿದ್ದ ಆರೋಪಿ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ಡಿ. 09ರಂದು ವೈರಲ್ ಆಗುತ್ತಿದ್ದಂತೆ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿ ಉಲ್ಲಾಸ್ ಅನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಮುಂದುವರಿದು ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *