ಬೆಂಗಳೂರು: 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಕ್‌ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದ ಬೆನ್ನಲ್ಲೇ, ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ಎಡಿಜಿಪಿ ಹುದ್ದೆಯಿಂದ ಅಲೋಕ್ ಕುಮಾರ್ ಅವರನ್ನು ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇತ್ತ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ. ದಯಾನಂದರನ್ನು ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಫೋನ್ ಟ್ಯಾಪಿಂಗ್ ಹಗರಣದ ಸಂದರ್ಭದಲ್ಲಿ ಅಲೋಕ್ ಕುಮಾರ್ ಬೆಂಗಳೂರಿನ ಪೊಲೀಸ್ ಆಯುಕ್ತರಾಗಿದ್ದರು. ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ತನ್ನ ವರದಿ ಸಲ್ಲಿಸಿತ್ತು. ಆದರೂ, 2025ರ ಮೇ ತಿಂಗಳಿನಲ್ಲಿ ರಾಜ್ಯ ಸರ್ಕಾರ ಇಲಾಕ್ ತನಿಖೆ ಮಾಡಲು ಆದೇಶಿಸಿತ್ತು.

ಎಂಟು ತಿಂಗಳ ಕಾನೂನು ಹೋರಾಟದ ಬಳಿಕ, ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಿಂದ ಅಲೋಕ್ ಕುಮಾರ್ ಅವರಿಗೆ ನೈತಿಕ ಜಯ ದೊರೆತಿದ್ದು, ಇದೀಗ ಡಿಜಿಪಿ ಹುದ್ದೆಗೂ ಆಯ್ಕೆ ಆಗಿದ್ದಾರೆ.

ಅಲೋಕ್ ಕುಮಾರ್ ಅವರ ಪುನರಾಗಿ ಬಲಿಷ್ಠ ವಾಪಸಾತಿಯಿಂದ “ಕ್ರಿಮಿನಲ್‌ಗಳ ಎದೆಯಲ್ಲಿ ಮತ್ತೆ ನಡುಕ ಶುರುವಾಗಿದೆ” ಎಂದು ಪೊಲೀಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

Leave a Reply

Your email address will not be published. Required fields are marked *