ಕೊಪ್ಪಳ: ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯಗಳಾಗಿರುವ ದುರಂತ ಘಟನೆ ಮಂಗಳವಾರ ಸಂಭವಿಸಿದೆ.

ಮನೆಯೊಳಗೆ ಹೊಸ ಸಿಲಿಂಡರ್ ಅಳವಡಿಸುವ ವೇಳೆ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ ರಾಜು, ದುರ್ಗಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಹುಲಿಗೆಮ್ಮ ಮತ್ತು ಶ್ರೀಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲರನ್ನು ತಕ್ಷಣವೇ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *