ವಿಟ್ಲ: ಅನ್ಯ ಕೋಮಿನ ಯುವಕನೊಬ್ಬ ಸ್ಥಳೀಯ ನಿವಾಸಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಉರಿಮಜಲು ಗ್ರಾಮದ ಗಣೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಗಣೇಶ್‌ರಿಗೆ ಸಾಂತ್ವಾನ ತಿಳಿಸಿದ್ದಾರೆ. ನಂತರ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ನಡೆಸಿ, ಕೋಲ್ಪೆ ಗ್ರಾಮದ ಸುಲೈಮಾನ್ ಅವರ ಪುತ್ರ ಇರ್ಷಾದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮೇಲೆ ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *