ಕಡಬ: ವಿದ್ಯಾನಗರದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವರ್ಷಿಣಿ (7ನೇ ತರಗತಿ) ಅವರು 2025ನೇ ಸಾಲಿನ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಹಾರಡಿ ಇಲ್ಲಿ ನಡೆಸಲಾಯಿತು.




ವಿಜೇತಳಾದ ವರ್ಷಿಣಿ ಅವರು ಕಡಬ ತಾಲೂಕಿನ ಬಲ್ಯ ಗ್ರಾಮದ ದೇರಾಜೆ ನಿವಾಸಿಗಳಾದ ಶ್ರೀ ಹರೀಶ್ ಹಾಗೂ ಶ್ರೀಮತಿ ದಿವ್ಯ ಅವರ ಪುತ್ರಿಯಾಗಿರುತ್ತಾರೆ.
ಈ ಸಾಧನೆಗಾಗಿ ಸರಸ್ವತಿ ಸಮೂಹ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿ, ವಿದ್ಯಾರ್ಥಿನಿಯ ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ.




