ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸೆಂಬರ್ 15, 2025 ರಂದು ಸಂಜೆ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ ಹಿಂಭಾಗದ ಬಹಿರ್ದೆಸೆಗೆ ತೆರಳಿದ್ದ ವೇಳೆ, ಜುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬಾಲಕರು ವಿಡಿಯೋ ಮಾಡುತ್ತಿದ್ದಾರೆಂದು ಆರೋಪಿಸಿ ಮೂವರನ್ನೂ ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಪಿರ್ಯಾದಿದಾರರು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *