ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ.

ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 1,500ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ.

ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್‌ ಟ್ರಾಫಿಕ್‌ ಕಂಟ್ರೋಲರ್‌ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ತಾಂತ್ರಿಕ ದೋಷವನ್ನು ಸರಿಪಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಭ್ಯವಿರುವ ಮಾಹಿತಿಯೊಂದಿಗೆ ಸಿಬ್ಬಂದಿ, ವಿಮಾನ ಮಾಹಿತಿಯನ್ನು ಬರಹದ ಮೂಲಕ ಸಿದ್ಧಪಡಿಸುತ್ತಿರುವ ಕಾರಣ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಹೀಗಾಗಿ ವಿಮಾನ ಹಾರಾಟ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

Leave a Reply

Your email address will not be published. Required fields are marked *