ಢಾಕಾ: ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಎಲ್ಲೆಡೆ ಆಕ್ರೋಶ ಕಂಡುಬರುತ್ತಿದೆ.

ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತದ ವಿರುದ್ಧ ಚಳವಳಿಯಲ್ಲಿ ಹಾಗೂ ಭಾರತದ (India) ವಿರೋಧಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದ ಇಂಕ್ವಿಲಾಬ್ ಮಂಚ್ ಸಂಚಾಲಕ ಷರೀಫ್‌ ಉಸ್ಮಾನ್‌ ಸಿಂಗಾಪುರದಲ್ಲಿ ಸಾವನ್ನಪ್ಪಿದ್ದಾರೆ. ಹಾದಿ ಸಾವಿನ ಬಳಿಕ ಬಾಂಗ್ಲಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

Leave a Reply

Your email address will not be published. Required fields are marked *