ಕಡಬ: ಡಿ.21ರಂದು 2025ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದೆ.ಜಿಲ್ಲೆಯಲ್ಲಿ 5 ವರ್ಷದೊಳಗಿನ 1,41,594 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಪಲ್ಸ್ ಪೋಲಿಯೊ ಲಸಿಕೆ ನೀಡಲು ಜಿಲ್ಲೆಯಲ್ಲಿ 921 ಸ್ಥಿರ ಬೂತ್, 32 ಟ್ರಾನ್ಸಿಟ್, ಮಂಗಳೂರು ನಗರದಲ್ಲಿ ಮೂರು ಮೊಬೈಲ್ ಬೂತ್ ಸೇರಿದಂತೆ 956 ಬೂತ್ಗಳಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುವುದು. ಐದು ವರ್ಷಕ್ಕಿಂತ ಕೆಳಗಿನ 29,203 ಮಕ್ಕಳಿಗೆ ಬಂಟ್ವಾಳದಲ್ಲಿ, ಬೆಳ್ತಂಗಡಿಯಲ್ಲಿ 18,091, ಮಂಗಳೂರಿನಲ್ಲಿ 66, 062, ಪುತ್ತೂರಿನಲ್ಲಿ 19, 958 ಮತ್ತು ಸುಳ್ಯದಲ್ಲಿ 8,280 ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.




ಟಿಎಚ್ ಒ ಮನವಿ:
5 ವರ್ಷದೊಳಗಿನ ಎಲ್ಲಾ ಮಕ್ಕಳು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಮನವಿ ಮಾಡಿದ್ದಾರೆ.




