ಕಡಬ:
ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ, ವಿದ್ಯಾರ್ಥಿಗಳು, ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್‌ನ ವಿದ್ಯಾರ್ಥಿಗಳು ಮಂಗಳೂರಿನ ಫಾದರ್ ಮುಲ್ಲರ್ ಸ್ಟೇಡಿಯಂನಲ್ಲಿ ದಿನಾಂಕ 21-12-2025ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.




ಕುಮಿಟೆ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿ ಸುಘೋಷ ಶಾಸ್ತಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. 6ನೇ ತರಗತಿಯ ಕಾರ್ತಿಕ್ ಎಚ್. ಅವರು ಪ್ರಥಮ ಸ್ಥಾನ, ಘೋಷಲ್ ರೈ, ಅದ್ವಿತ್ ಜೆ. ಹಾಗೂ ಆರ್. ಮಯೂರ್ ಅವರು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. 4ನೇ ತರಗತಿಯ ವಿದ್ಯಾರ್ಥಿ ಶಿವಾಂಕ್ ಎಸ್. ಅವರು ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಕಟಾ ವಿಭಾಗದಲ್ಲಿ 6ನೇ ತರಗತಿಯ ಅದ್ವಿತ್ ಜೆ. ಹಾಗೂ ಕಾರ್ತಿಕ್ ಎಚ್. ಅವರು ತೃತೀಯ ಸ್ಥಾನವನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಿಜೇತರಾದ ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಶ್ರೀ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸತೀಶ್ಚಂದ್ರ ಕೆ. ಅವರು ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.




