ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ.




ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.



ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


