ಬಾಂಗ್ಲಾದೇಶದಲ್ಲಿ ನಡೆದ ಹಿಂದು ಕಾರ್ಯಕರ್ತ ದೀಪು ಚಂದ್ರ ದಾಸ ಅವರ ಹತ್ಯೆ ಹಾಗೂ ಸಜೀವ ದಹನದ ಅಮಾನುಷ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಇಂದು (26/13/2025) ಸಂಜೆ 5 ಗಂಟೆಗೆ ಪುತ್ತೂರಿನ ದರ್ಭೆ ವೃತ್ತದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಿಂದುಗಳ ಮೇಲಿನ ನಿರಂತರ ದೌರ್ಜನ್ಯ, ಹತ್ಯೆ ಹಾಗೂ ಮಾನವ ಹಕ್ಕು ಉಲ್ಲಂಘನೆಗಳನ್ನು ತೀವ್ರವಾಗಿ ಖಂಡಿಸುವ ಉದ್ದೇಶದಿಂದ ಈ ಪ್ರತಿಭಟನೆ ಆಯೋಜಿಸಲಾಗಿದ್ದು, “ಮಲಗಿದರೆ ಮೆಟ್ಟುವರು, ಎದ್ದರೆ ಬಾಗುವರು” ಎಂಬ ಘೋಷಣೆಯೊಂದಿಗೆ ಹಿಂದು ಸಮಾಜ ಏಕತೆ ಪ್ರದರ್ಶಿಸಲು ಕರೆ ನೀಡಲಾಗಿದೆ.





ಈ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಂಡಿಸುವಂತೆ ಹಾಗೂ ಸಂಬಂಧಪಟ್ಟ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಹಿಂದು ಬಾಂಧವರು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಪುತ್ತೂರು ಘಟಕವು ಮನವಿ ಮಾಡಿದೆ.




