ಬೆಂಗಳೂರು:
ನಗರದ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದ್ದ ವೇಳೆ ಯುವತಿಯೊಬ್ಬಳ ಖಾಸಗಿ ಅಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡೆಲಿವರಿ ಬಾಯ್‌ನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಗುವಾಹಟಿ ಮೂಲದ ಮನೋಜ್ (27) ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು ನಗರದ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದ್ದ ಸಂದರ್ಭ, ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮನೋಜ್ ಯುವತಿಯೊಬ್ಬಳಿಗೆ ಅಸಭ್ಯವಾಗಿ ವರ್ತಿಸಿ ಖಾಸಗಿ ಅಂಗವನ್ನು ಮುಟ್ಟಿ ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ.

ಈ ಘಟನೆಗೆ ತೀವ್ರವಾಗಿ ಮುಜುಗರಕ್ಕೊಳಗಾದ ಯುವತಿ ತಕ್ಷಣವೇ ಸ್ಥಳದಲ್ಲಿದ್ದ ಹದೇವಪುರ ಪೊಲೀಸ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರು ಸ್ವೀಕರಿಸಿದ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಅಗತ್ಯವೆಂಬುದನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

Leave a Reply

Your email address will not be published. Required fields are marked *