ನವದೆಹಲಿ : ಹೊಸ ವರ್ಷ 2026ರ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಹೊಸ ವರ್ಷವು ಎಲ್ಲರಿಗೂ ಹೊಸ ಭರವಸೆಗಳು, ಹೊಸ ನಿರೀಕ್ಷೆಗಳು ಮತ್ತು ಹೊಸ ಆತ್ಮವಿಶ್ವಾಸವನ್ನು ತರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ಜೀವನದಲ್ಲಿ ಮುನ್ನಡೆಯಲು ಪ್ರತಿಯೊಬ್ಬರೂ ಪ್ರತಿಬದ್ಧರಾಗಬೇಕು, ಪರಿಶ್ರಮ ಮತ್ತು ಸಂಕಲ್ಪದೊಂದಿಗೆ ಮುಂದುವರಿದರೆ ಯಶಸ್ಸು ಸಾಧ್ಯವಾಗುತ್ತದೆ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಯನ್ನು ಬೆಳೆಸುವತ್ತ ಗಮನ ಹರಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. 2026ನೇ ವರ್ಷವು ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಆರೋಗ್ಯ ಹಾಗೂ ಸಮೃದ್ಧಿಯನ್ನು ತರುವಂತಾಗಲಿ ಎಂದು ಅವರು ಆಶಿಸಿದ್ದಾರೆ.
ಪ್ರಧಾನಿ ಮೋದಿಯ ಹೊಸ ವರ್ಷದ ಸಂದೇಶಕ್ಕೆ ದೇಶಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *