ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

01-01-2026 ರಂದು ಬೆಳಿಗ್ಗೆ, ಪರ್ಲಡ್ಕ ಜಂಕ್ಷನ್‌ನಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪಿ.ಎಸ್‌.ಐ ಜನಾರ್ಧನ ಕೆ.ಎಂ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಶಂಕಿತನನ್ನು ತಡೆದು ವಿಚಾರಣೆ ನಡೆಸಿದರು. 

ವಿಚಾರಣೆ ವೇಳೆ ಆತನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (36) ಎಂದು ತಿಳಿದುಬಂದಿದೆ.


ತಪಾಸಣೆ ನಡೆಸಿದಾಗ ಆರೋಪಿಯ ಬಳಿ ನಿಷೇಧಿತ 400 ಗ್ರಾಂ ಗಾಂಜಾ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2026 ಕಲಂ 8(ಸಿ), 20(ಬಿ) ಎನ್‌ಡಿಪಿಎಸ್ ಕಾಯ್ದೆ 1985 ರಂತೆ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *