ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಹಾವಂಜಿ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ಬೋಟ್ಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು.





ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಐಪಿಎಸ್ ಅವರ ನಿರ್ದೇಶನದಂತೆ, ಜಿಲ್ಲಾ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬ್ರಹ್ಮಾವರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಅಶೋಕ ಮಾಳಾಬಗಿ ಹಾಗೂ ಶ್ರೀ ಸುದರ್ಶನ್ ದೊಡಮನಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಈ ದಾಳಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿದ್ದ 17 ಬೋಟುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸಲಾಗುತ್ತಿದೆ.




