ಪುತ್ತೂರು: ಪಾಣಾಜೆ ಗ್ರಾಮದ ಭರಣ್ಯ ನಿವಾಸಿ, ಶ್ರೀನಿವಾಸ ಭರಣ್ಯ ಅವರ ಪತ್ನಿ ಹಾಗೂ ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅಂಬಿಕಾ (35) ಅವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.





ಅಂಬಿಕಾ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಲಹಾ ಸಮಿತಿ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಸೂರಾಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC) ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಚುರುಕಾಗಿ ಗುರುತಿಸಿಕೊಂಡಿದ್ದ ಅಂಬಿಕಾ ಅವರ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಸಂಘಟನೆಗಳು ಹಾಗೂ ಸ್ಥಳೀಯ ನಾಗರಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಮೃತರು ಪತಿ ಶ್ರೀನಿವಾಸ ಭರಣ್ಯ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರಗಳು ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಬಂಧು–ಮಿತ್ರರ ಉಪಸ್ಥಿತಿಯಲ್ಲಿ ನೆರವೇರಲಿವೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


