ಕಡಬ: ವೃದ್ದರೊಬ್ಬರು ಸರಕಾರಿ ಬಸ್ಸಿನಿಂದ ಇಳಿಯುವಾಗ ಚಾಲಕ ಏಕಾಏಕಿ ಬಸ್ಸನ್ನು ಚಲಾಯಿಸಿದ ಪರಿಣಾಮ ಬಸ್ಸಿನಿಂದ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ನಡೆದಿದೆ.

ಮೃತಪಟ್ಟವರನ್ನು ​ಪೆರಾಬೆ ಗ್ರಾಮದ ಬೆಳ್ಪಾಡಿ ನಿವಾಸಿ ಬಾಬು (65) ಎಂದು ಗುರುತಿಸಲಾಗಿದೆ.
ಮೃತರು ಶನಿವಾರ ಸಂಜೆ ವೇಳೆಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕುಂತೂರಿಗೆ ಆಗಮಿಸಿದ್ದರು. ಕುಂತೂರು ಬಸ್ ನಿಲ್ದಾಣದಲ್ಲಿ ಬಸ್ಸು ನಿಂತಾಗ ಅವರು ಹಿಂಬದಿ ಬಾಗಿಲಿನಿಂದ ಕೆಳಕ್ಕೆ ಇಳಿಯುತ್ತಿದ್ದರು. ಇದನ್ನು ಗಮನಿಸದೆ ಬಸ್ ಚಾಲಕ ಬಸ್ಸನ್ನು ಒಮ್ಮಲೇ ಮುಂದಕ್ಕೆ ಚಲಾಯಿಸಿದ್ದಾನೆ. ಇದರಿಂದಾಗಿ ಆಯ ತಪ್ಪಿದ ಬಾಬು ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಪಘಾತದಿಂದಾಗಿ ಗಂಭಿರ ಸ್ವರೂಪ ಗಾಯಗೊಂಡ ಅವರನ್ನು ಸ್ಥಳೀಯರು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.. ಆದರೆ ಅವರು ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಬಸ್ಸ್ ಚಾಲಕನ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *