ಬೆಳ್ತಂಗಡಿ: ಲಾಯಿಲ ಸೇತುವೆ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಡಿಸೆಂಬರ್ 17ರಂದು ನಡೆದಿದೆ. ಸ್ಥಳೀಯರು ಗಮನಿಸಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂತರ ಶವವನ್ನು ಸಾಯಿ ರಾಮ್ ಆಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ರವಾನಿಸಲಾಯಿತು. ಈ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕ ಪವನ್ ಬಂಗೇರ ಹಾಗೂ ಕರುಣಾಕರ ರಂಗೆದ ಗುತ್ತು ಸಹಕರಿಸಿದರು.

ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆ ಹಾಗೂ ಸಾವಿನ ಕಾರಣ ಕುರಿತು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *