
ಪುತ್ತೂರು: ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿಯನ್ನು ಪುತ್ತೂರು ತಹಶೀಲ್ದಾರರ ಮುಖಾಂತರ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಮುಖಂಡರು, ದೇಶದಾದ್ಯಂತ ಏಕೀಕೃತ ಕಾಯ್ದೆ ಜಾರಿಗೆ ಬಂದರೆ ಗೋಸಂರಕ್ಷಣೆ ಮತ್ತಷ್ಟು ಬಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಸರ್ಕಾರವು ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಜಯಂತ್ ಶೆಟ್ಟಿ ಕಂಬಳತ್ತಡ್ಡ, ಯಶಸ್ವಿನಿ ಶಾಸ್ತ್ರೀ, ಜಗದೀಶ್ ಚನಿಲ, ರಮೇಶ್ ಪೂಜಾರಿ ಕಾಡ್ಲ, ಅರವಿಂದ ಇರ್ದೆ ಸೇರಿದಂತೆ ಇತರರು ಉಪಸ್ಥಿತರಿದ್ದರು.




