ಗುತ್ತಿಗಾರಿನ ಚಿಕ್ಕುಳಿ ಬಳಿ ನಡೆದ ದುಃಖದ ಘಟನೆಯಲ್ಲಿ, ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪೂಜಾ ಎಂಬವರು ಮೃತಪಟ್ಟ ವಿದ್ಯಾರ್ಥಿನಿ.
ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದ ಪೂಜಾ ಅಸ್ವಸ್ಥರಾದ ನಂತರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳಿಂದ ಚಿಕಿತ್ಸೆ ದೊರೆಯುತ್ತಿದ್ದರೂ ಪರಿಣಾಮಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿರುವುದು ತಿಳಿದು ಬಂದಿದೆ.




ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ. ಈ ದುರ್ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



